ಪುಸ್ತಕ ಪ್ರೇಮಿ ವಿದ್ಯಾರ್ಥಿ ಬಳಗ ರಚಿಸಿಕೊಳ್ಳಿ

ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರ, ವಿದ್ಯಾರ್ಥಿಗಳನ್ನು, ಯುವಜನರನ್ನು ಸಾಹಿತ್ಯಾಭಿರುಚಿಯತ್ತ ಆಕರ್ಷಿಸಲು, ಅವರಲ್ಲಿ ಸಾಂಸ್ಕೃತಿಕ ಕ್ರಿಯಾಶೀಲತೆ ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಪುಸ್ತಕ ಪ್ರೇಮಿ ವಿದ್ಯಾರ್ಥಿ ಬಳಗವನ್ನು ರಚಿಸಲು ತೀರ್ಮಾನಿಸಿದೆ. ಇದಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕನಿಷ್ಠ 5ರಿಂದ 15ಮಂದಿ ವಿದ್ಯಾರ್ಥಿಗಳನ್ನೊಳಗೊಂಡಂತೆ ಕಾರ್ಯಕಾರಿ ಸಮಿತಿ ರಚಿಸಿಕೊಂಡು, ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದು.ಾಲೇಜಿನಲ್ಲಿ ಸಾಂಸ್ಕೃತಿಕ ವಾತಾವರಣವನ್ನು ಕ್ರಿಯಾಶೀಲವಾಗಿಡುವ ನಿಟ್ಟಿನಲ್ಲಿ ತಿಂಗಳಿಗೆ ಒಂದರಂತೆ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಈ ಬಳಗ ಹಮ್ಮಿಕೊಳ್ಳುತ್ತದೆ. ಇದಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕಾರ್ಯಕ್ರಮವೊಂದಕ್ಕೆ ಗರಿಷ್ಠ ಮಿತಿಯೊಳಪಟ್ಟು 5000ರೂ. ಗಳ ವಾಸ್ತವಿಕ ವೆಚ್ಚವನ್ನು ಭರಿಸಲಾಗುವುದು. ಅರ್ಜಿ ಸಲ್ಲಿಸಲು ಡಿ.31ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ವಿವರಗಳನ್ನು ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪಡೆಯಬಹುದು.